ಸರ್ಕಾರಿ ವಲಯದ 12 ಬ್ಯಾಂಕುಗಳಿಂದ 50 ಸಾವಿರ ಸಿಬ್ಬಂದಿ ನೇಮಕಾತಿ: ಇಂದೆ ಅರ್ಜಿ ಸಲ್ಲಿಸಿ

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ ದೊರಕಿದ್ದು, ಸರ್ಕಾರಿ ವಲಯದ 12 ಬ್ಯಾಂಕುಗಳಿಂದ 50 ಸಾವಿರ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಎಸ್‌ಬಿಐ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಾಗೂ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಇತರ ಬ್ಯಾಂಕುಗಳು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿವೆ. ಅವುಗಳಲ್ಲಿ 21 ಸಾವಿರ ಹುದ್ದೆಗಳು ಅಧಿಕಾರಿ ಹಂತದ ಹುದ್ದೆಗಳಾಗಿದ್ದು, ಉಳಿದಂತೆ ಗುಮಾಸ್ತ ಹಾಗೂ ಇತರ ಹುದ್ದೆಗಳ ನೇಮಕಾತಿಗೆ ಕರೆಯಲಾಗಿದೆ.
ಎಸ್‌ಬಿಐ ಬ್ಯಾಂಕ್‌ 20ಸಾವಿರ ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಿದ್ದು, ಇವುಗಳಲ್ಲಿ 505 ಪ್ರೊಬೇಷನರಿ ಅಧಿಕಾರಿಗಳು, 13,455 ಕಿರಿಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಿದೆ. ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ 5ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ 4ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.
ಒಟ್ಟಾರೆಯಾಗಿ ಸರ್ಕಾರಿ ವಲಯದ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಲು ಮುಂದಾಗಿದೆ. ಇದು ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

Leave a Comment

WhatsApp Group Join Now
Telegram Group Join Now