2nd PUC RESULT| ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ! ಯಾವಾಗ ಎಂಬ ಮಾಹಿತಿ ಇಲ್ಲಿದೆ

2nd PUC RESULT| ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ! ಯಾವಾಗ ಎಂಬ ಮಾಹಿತಿ ಇಲ್ಲಿದೆ.

Karnataka second PUC result 2025:

ಕರ್ನಾಟಕದಲ್ಲಿ ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈಗ ಫಲಿತಾಂಶಕ್ಕೆ ದಿನಗಣನೇ ಆರಂಭವಾಗಿದೆ. ಪಲಿತಾಂಶ ಪ್ರಕಟ ಯಾವಾಗ? ರಿಸಲ್ಟ್ ಅನ್ನು ಆನ್ಲೈನಲ್ಲಿ ಹೇಗೆ ನೋಡುವುದು? ಅಂಕಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬ ವಿವರವು ಕೆಳಗಿನಂತಿವೆ.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನವು ಈ ವಾರ ಮುಕ್ತಾಯಗೊಳಲ್ಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶವೂ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಾಯಕ ಮಂಡಳಿಯು ತಿಳಿಸಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆದಿತ್ತು, ಸದ್ಯ ಮೌಲ್ಯಮಾಪನ ಪ್ರಕ್ರಿಯೆಯು ಚಾಲ್ತಿಯಲ್ಲಿದೆ.

ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು, ಈ ವರ್ಷವೂ ಸರಿ ಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ.

ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಇಲಾಖೆ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. kseab.karnataka.gov.in ಅಥವಾ karresults.nic.in ವೆಬ್ ಸೈಟ್ಗಳಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.

ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ;

  • ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಆದ kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡಿ,
  • ಹೋಂ ಪೇಜ್ ನಲ್ಲಿ ಸೆಕೆಂಡ್ ಪಿಯುಸಿ ರಿಸಲ್ಟ್ 2025 ರ ಮೇಲೆ ಕ್ಲಿಕ್ ಮಾಡಿ,
  • ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್ವರ್ಡ್ ಬಳಕೆ ಮಾಡಿ,
  • ದ್ವಿತೀಯ ಪಿಯುಸಿ ಫಲಿತಾಂಶ 2028 ಸ್ಕ್ರೀನ್ ಅಲ್ಲಿ ಕಾಣಿಸುತ್ತದೆ.
  • ಈಗ ನೀವು ನಿಮ್ಮ ರಿಸಲ್ಟ್ ಅನ್ನು ನೋಡಬಹುದು, ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶವೂ ಕೂಡ ಇರುತ್ತದೆ.

ಮಾರ್ಚ್ 1 ರಿಂದ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸುಮಾರು 7,13,862 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು, ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತ್ತು, 6,61,474 ಹೊಸ ವಿದ್ಯಾರ್ಥಿಗಳು, 34,071 ಹಳೆಯ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

 

WhatsApp Group Join Now
Telegram Group Join Now

Leave a Comment

copy
share with your friends.