ರೈತರಿಗೆ ಕೃಷಿ ಉಪಕರಣಗಳಿಗೆ ಶೇ.50ರಷ್ಟು ಸಹಾಯಧನ : ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೃಷಿಯಲ್ಲಿ ಯಾಂತ್ರೀಕರಣ ಉತ್ತೇಜಿಸುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಆಧುನಿಕ ಉಪಕರಣಗಳ ಉಪಯೋಗ ತಲುಪಿಸಲು ರೈತರಿಗೆ ಕೃಷಿ ಉಪಕರಣಗಳಿಗೆ ಶೇ. 50ರಷ್ಟು ಸಹಾಯಧನ ನೀಡಲಾಗುತ್ತಿದೆ. 2025-26ರ ಸಾಲಿನನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಸೋಮವಾರಪೇಟೆ ಮತ್ತು ಕುಶಾಲನಗರ ರೈತರಿಗೆ ಈ ಅವಕಾಶ ನೀಡಲಾಗಿದ್ದು, ಆಸಕ್ತ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ಜೊತೆಗೆ ಆರ್‌ಟಿಸಿ, ಆಧಾರ್‌ ಕಾರ್ಡ್‌ ಜೆರಾಕ್ಸ್‌, ಒಂದು ಭಾವಚಿತ್ರ, ಬ್ಯಾಂಕ್‌ ಪಾಸ್‌ ಬುಕ್‌ ಹಾಗೂ 100ರೂಪಾಯಿಯ ಛಾಪಕಾಗದ ತೆಗೆದುಕೊಂಡು ಹೋಗಬೇಕು.
ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಈ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದೆ.


ಇನ್ನು, ಆಸಕ್ತ ರೈತರು ಅತೀ ಶೀಘ್ರದಲ್ಲಿ ತಮ್ಮ ಹತ್ತಿರದ ರೈ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕುಶಾಲ ನಗರ ಹಾಗೂ ಸೋಮವಾರ ಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

Leave a Comment