Gruha Arogya Yojana: ರಾಜ್ಯದಲ್ಲಿ ಮಾರ್ಚ್ ನಿಂದ ಈ ಯೋಜನೆ ಜಾರಿ!

Gruha Arogya Yojana: ರಾಜ್ಯದಲ್ಲಿ ಮಾರ್ಚ್ ನಿಂದ ಈ ಯೋಜನೆ ಜಾರಿ!

ರಾಜ್ಯದ ಕೋಲಾರದಲ್ಲಿ ಯಶಸ್ವಿಯಾಗಿರುವ Gruha Arogya ಯೋಜನೆಯನ್ನು ರಾಜ್ಯಾದ್ಯಂತ ಮಾರ್ಚ್ ತಿಂಗಳಿನಿಂದ ಜಾರಿಗೊಳಿಸಲಾಗುತ್ತದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now

ಸರ್ಕಾರವು ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವಂತಹ ಹೆಚ್ಚಿನ ಆದ್ಯತೆ ನೀಡಿದೆ. ಬಡ, ಸಾಮಾನ್ಯ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆ ಎಂದರೆ ಜನಸಾಮಾನ್ಯರಿಗೆ ಮನೆ ಬಾಗಿಲಿಗೆ ಹೋಗಿ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆಯಾಗಿದೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೋಗಗಳನ್ನು ಗುರುತು ಮಾಡಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಹೊಂದಿರುವ ಯೋಜನೆಯು ಇದಾಗಿದೆ.

ಈ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ ಕಾರ್ಯಕರ್ತರು, ವೈದ್ಯರು ಭೇಟಿ ನೀಡಿ 30 ವರ್ಷ ದಾಟಿದವರನ್ನು ತಪಾಸಣೆಗೆ ಒಳಪಡಿಸಿ ಅವರಿಗೆ ಏನಾದರೂ ಸಮಸ್ಯೆ ಇದ್ದರೆ ಉಚಿತವಾಗಿ ಔಷಧವನ್ನು ನೀಡುವುದಾಗಿದೆ.

ಹಿಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರು ಆರೋಗ್ಯ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗಳಿಗೆ ಅಳಿಯಬೇಕಾಗಿತ್ತು. ಶುಗರ್, ಬಿಪಿ ಕಾಯಿಲೆ ಇದ್ದರೂ ತಪಾಸಣೆ ಮಾಡಿಸದೆ ನಿರ್ಲಕ್ಷ ಮಾಡುತ್ತಿದ್ದರು, ಇದನ್ನು ಮನಗಂಡು ಆರಂಭದಲ್ಲಿ ಏನು ಇಂತಹ ಕಾಯಿಲೆಗಳನ್ನು ತಡೆಯುವುದು ಮುಖ್ಯ ಎಂದು ಗೃಹ ಆರೋಗ್ಯ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

 

 

 

 

 

Leave a Comment

WhatsApp Group Join Now
Telegram Group Join Now