B-Khata: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬಿ ಖಾತಾ ಸೌಲಭ್ಯ! ಇಲ್ಲಿದೆ ಸಂಪೂರ್ಣ ಮಾಹಿತಿ.

B-Khata: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬಿ ಖಾತಾ ಸೌಲಭ್ಯ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬಿ-ಖಾತ ಸೌಲಭ್ಯದ ಕುರಿತು ತೆರಿಗೆ ಸಂಗ್ರಹ ಇಲಾಖೆಗೆ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯು ಈ ಲೇಖನದ ಮೂಲಕ ತಿಳಿಯೋಣ.

ಕರ್ನಾಟಕದ ರಾಜ್ಯ ಸಚಿವ ಸಂಪುಟ ಸಭೆಯು ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2025ಕ್ಕೇ ಒಪ್ಪಿಗೆಯನ್ನು ನೀಡಿದ್ದು, ಇದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ಎಂದು ನೀಡಿ, ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಪಂಚಾಯಿತಿಗಳಿಗೆ ವಾರ್ಷಿಕವಾಗಿ ಸಾವಿರಾರು ಕೋಟಿ ರೂ. ತೆರಿಗೆ ಸಂಗ್ರಹವಾಗಲಿದೆ.

B-Khata ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ತೀರ್ಮಾನ;

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಾರಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ, BBMP ಸೇರಿದಂತೆ ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವಂತೆ ಗ್ರಾಮೀಣ ಪ್ರದೇಶದಲ್ಲಿಯೂ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಬಡಾವಣೆಗಳು, ಕಟ್ಟಡಗಳು, ನಿವೇಶನಗಳಿಗೆ ಬಿ-ಖಾತಾ ನೀಡಿ ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಅನಧಿಕೃತ ಬಡಾವಣೆಗಳ ರಚನೆಗಳನ್ನು ತಡೆಗಟ್ಟಲು ಇ-ಸ್ವತ್ತು ತಂತ್ರಾಂಶವನ್ನು 15 ಜೂನ್ 2013ರಲ್ಲಿ ಜಾರಿಗೊಳಿಸಿದ್ದು, ಪಂಚತಂತ್ರ ಫಲಿತಾಂಶದಲ್ಲಿ 1.40 ಕೋಟಿ ಆಸ್ತಿಗಳ ವಿವರವನ್ನು ನಮೂದಿಸಲಾಗಿದೆ, ಆದರೆ ಇ-ಸ್ವತ್ತು ತಂತ್ರಾಂಶದಲ್ಲಿ 40 ಲಕ್ಷ ಆಸ್ತಿಗಳಿಗೆ ಅಷ್ಟೇ ನೋಂದಣಿ ಮಾಡಲಾಗಿದೆ, ಉಳಿದ 96 ಲಕ್ಷ ಆಸ್ತಿಗಳು ಇ-ಸ್ವತ್ತು ವ್ಯಾಪ್ತಿಯಿಂದ ಹೊರಗಿದೆ.

B-Khata 800 ಕೋಟಿ ರೂ. ತೆರಿಗೆ ಸಂಗ್ರಹ;

ಈಗ ಇ-ಸ್ವತ್ತು ವ್ಯಾಪ್ತಿಯಲ್ಲಿ ಬರುವ 40 ಲಕ್ಷ ಆಸ್ತಿಗಳ ಪೈಕಿ 34 ಲಕ್ಷ ಆಸ್ತಿಯಿಂದ ರೂ.800 ಕೋಟಿ ತೆರಿಗೆ ಸಂಗ್ರಹವಾಗಿದೆ, ಬಾಕಿ, 96 ಲಕ್ಷ ಆಸ್ತಿಗಳು ಬಿ ಖಾತಾ ಪಡೆದುಕೊಂಡರೆ, ಪಂಚಾಯಿತಿಗಳಿಗೆ ಎರಡು ಮೂರು ಪಟ್ಟು ಆಸ್ತಿ ತೆರಿಗೆ ಹೆಚ್ಚಾಗಲಿದೆ, ಈ ತೀರ್ಮಾನಕ್ಕೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 199(B) ಮತ್ತು 199(C) ಅಡಿಯಲ್ಲಿ ಸೇರ್ಪಡೆ ಮಾಡುವ ಮೂಲಕ ಇದೆ ವಿಧಾನ ಮಂಡಲ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕ ಮಂಡನೆ ಮಾಡಲು ಸಚಿವ ಸಂಪುಟ ಸಭೆಯು ಅನುಮೋದನೆಯನ್ನು ಮಾಡಿದೆ.

ರಾಜ್ಯ ಸರ್ಕಾರದಿಂದ ಹಳ್ಳಿ ಹಳ್ಳಿಯಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ ಖಾತ ನೀಡಲು ಕಾಯ್ದೆಗೂ ತಿದ್ದುಪಡಿ ತರಲಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅನಧಿಕೃತ ಆಸ್ತಿಗಳಿಗೆ ಪಟ್ಟಣ, ನಗರ ವ್ಯಾಪ್ತಿಯಲ್ಲಿ ನೀಡುವಂತಿಯೇ ಬಿ ಖಾತ ವಿತರಣೆ ನಿರ್ಧಾರವನ್ನು ಸರ್ಕಾರ ಶೀಘ್ರವೇ ಪ್ರಕಟಣೆ ಮಾಡುವ ಸಾಧ್ಯತೆ ಇದೆ.

 

WhatsApp Group Join Now
Telegram Group Join Now

Leave a Comment

copy
share with your friends.