ಬೆಂಗಳೂರು: ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ ನಲ್ಲಿಎಂಜಿನಿಯರ್ ನಿಂದ ಚಾಲಕನವರೆಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಹಾಯಕ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್, ಭದ್ರತಾ ಅಧಿಕಾರಿ,ಮೆಕ್ಯಾನಿಕ್ ಮತ್ತು ಚಾಲಕ ಸೇರಿದಂತೆ ಒಟ್ಟು ೩೧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ ೩೦ರ ಒಳಗೆ ಬಿಇಸಿಐಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸಹಾಯಕ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿಯನ್ನು ಪಡೆದಿರಬೇಕು. ಚಾಲಕ, ಮೆಕ್ಯಾನಿಕ್ ಮತ್ತು ಡಿ ಸೆಕ್ಷನ್ ಹಾಲ್ ತಾಂತ್ರಿಕ ಅಥವಾ ಅಹಾಯಕ ಸಿಬ್ಬಂದಿ ಹುದ್ದೆಗಳಿಗೆ ಕನಿಷ್ಠ ಅರ್ಹತೆ ೧೦ನೇ ಅಥವಾ ೧೨ನೇ ತರಗತಿ ಪಾಸ್ ಆಗಿರಬೇಕು. ಮೆಕ್ಯಾನಿಕ್ ಹುದ್ದೆಗೆ ಐಟಿಐ ಪ್ರಮಾಣಪತ್ರ ಹೊಂದಿರಬೇಕು. ಸಾಮಾನ್ಯ ಪದವಿ ಪಡೆದ ಅಭ್ಯರ್ಥಿಗಳೂ ಕೂಡ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆ ಮತ್ತು ಅರ್ಹತೆಯ ಆಧಾರದ ಮೇಲೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಂಬಂಳವನ್ನು ನಿರ್ಧರಿಸಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ, ಒಬಿಸಿ ಮತ್ತು ಇಡಬ್ಯ್ಲೂಎಸ್ ವರ್ಗದ ಅಭ್ಯರ್ಥಿಗಳು ೨೫ ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಟಿ,ಎಸ್‌ಸಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
