Free Bus: ಪುರುಷರಿಗೂ ಉಚಿತ ಬಸ್? ಈ ಯೋಜನೆ ಎಲ್ಲರಿಗೂ ಸಿಗಲ್ಲ! ಸಂಪೂರ್ಣ ಮಾಹಿತಿ ಇಲ್ಲಿದೆ.
ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಮೇಲೆ, ಚುನಾವಣೆಗೂ ಮುನ್ನ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತಂದಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ, ರಾಜ್ಯದ ಎಲ್ಲಾ ಮಹಿಳೆಯರು ಉಚಿತವಾಗಿ ಬಸ್ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯದ ಮಹಿಳೆಯರು ಈ ಯೋಜನೆಯನ್ನು ಪಡೆಯುತ್ತಿದ್ದು, ಪ್ರತಿದಿನ ಲಕ್ಷಾಂತರ ಮಹಿಳೆಯರು KSRTC ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ.
ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕಲ್ಪಿಸಿದ ಉಚಿತ ಪ್ರಯಾಣವನ್ನು, ಪುರುಷರಿಗೂ ನೀಡಬೇಕು ಎಂದು ಬಹಿರಂಗವಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಕನಿಷ್ಠ ವಿದ್ಯಾರ್ಥಿಗಳಿಗೆ ಆದರೂ ಈ ಉಚಿತ ಸೌಲಭ್ಯವು ಸಿಗಬೇಕು ಎಂಬ ಬೇಡಿಕೆ ಇದೆ, ಇದೀಗ ಈ ಯೋಜನೆ ರಾಜ್ಯದ ಮಹಿಳೆಯರಿಗೆ ಮಾತ್ರ ಸೀಮಿತವಿದ್ದು, ಮುಂದಿನ ದಿನಗಳಲ್ಲಿ ಈ ವ್ಯಾಪ್ತಿಗೆ ಬರುವ ಪುರುಷರಿಗೂ ಸೌಲಭ್ಯ ದೊರೆಯಲಿದೆ ಎನ್ನುವ ಸುಳಿವು ಸಿಕ್ಕಿದೆ.
ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರವು ಜಾರಿಗೆಗೊಳಿಸಿದ್ದು, ಎಲ್ಲಾ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ಹೊರೆಯಾಗಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಪಂಚ ಗ್ಯಾರೆಂಟಿ ಯೋಜನೆಗಳನ್ನು ರಾಜ್ಯ ಸರ್ಕಾರಕ್ಕೆ ಸರಿಯಾಗಿ ಜಾರಿಗೆ ತರಲು ಆಗುತ್ತಿಲ್ಲ, ಹೀಗಾಗಿಯೇ ಕಳೆದೆರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲು ಸಾಧ್ಯವಾಗಲಿಲ್ಲ, ಹಾಗೆಯೇ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಸರಿಯಾಗಿ ಜಮಾ ಆಗುತ್ತಿಲ್ಲ ಎಂದು ಮಹಿಳೆಯರು ಬಹಿರಂಗವಾಗಿಯೇ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇತ್ತ ಸರ್ಕಾರವು ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಿದ್ದು, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣವನ್ನು ನಮಗೂ ನೀಡಬೇಕು ಎಂದು ಹಲವರು ಬೇಡಿಕೆ ಇಟ್ಟಿದ್ದಾರೆ. ಶಕ್ತಿ ಯೋಜನೆಯಡಿ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಪುರುಷರಿಗೆ ಉಚಿತ ಬಸ್ ಸೌಲಭ್ಯ ನೀಡಿದರೆ ಸರ್ಕಾರಕ್ಕೆ ಭಾರಿ ನಷ್ಟವಾಗಲಿದೆ ಎಂದು ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಗೆ ಒಳಗಾಗುತ್ತಿರುವ ರೋಗಿಗಳಿಗೆ ಉಚಿತ ಪ್ರಯಾಣ ಮಾಡಿಕೊಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಅವರು, ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ವಿಧಾನ ಸಭೆಯ ಸಭಾಧ್ಯಕ್ಷರಾದ ಯುಟಿ ಖಾದರ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್ ಚಿಕಿತ್ಸೆಗೆ, ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಯುಟಿ ಖಾದರ್ ಅವರು ಸಿಎಂ ಅವರಿಗೆ ಪಾತ್ರ ಬರೆದಿದ್ದಾರೆ. ಸಿಎಂ ಅವರು ಒಪ್ಪಿಗೆ ನೀಡಿದರೆ, ಇನ್ಮುಂದೆ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗುತ್ತಿರುವ ಪುರುಷ ಪ್ರಯಾಣಿಕರಿಗೆ ಉಚಿತ ಬಸ್ ಸೌಲಭ್ಯ ಸಿಗಲಿದೆ. ಈ ಕುರಿತಂತೆ ಮಾರ್ಚ್ 07 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮಂಡಿಸುವ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.