ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್:‌ ರೈಲ್ವೆ ಇಲಾಖೆಯಲ್ಲಿ 50ಸಾವಿರ ಉದ್ಯೋಗಿಗಳ ನೇಮಕಾತಿ

ನವದೆಹಲಿ: ರೈಲ್ವೆ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರೈಲ್ವೆ ಸಚಿವಾಲಯ ಗುಡ್‌ ನ್ಯೂಸ್‌ ನೀಡಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ 50ಸಾವಿರ ಉದ್ಯೋಗಿಗಳ ನೇಮಕಾತಿಗೆ ಮುಂದಾಗಿದೆ.
ಭಾರತೀಯ ರೈಲ್ವೆ 2025-26ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಂಭತ್ತು ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದು, ಇದು ದೇಶದಾದ್ಯಂತ ಯುವಕರಿಗೆ ಸರ್ಕಾರಿ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ನವೆಂಬರ್‌ ೨೦೨೪ರಿಂದ ಒಟ್ಟು 1.86 ಕೋಟಿ ಜನರು ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಾರೆ.
ಈ ನೇಮಕಾತಿ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ರೋಜ್ಗಾರ್‌ ಮೇಳ ಅಭಿಯಾನದ ಭಾಗವಾಗಿದೆ. ಇಷ್ಟು ದೊಡ್ಡ ಸಂಖ್ಯೆಯ ಪರೀಕ್ಷೆಗಳನ್ನು ನಡೆಸುವುದು ರೈಲ್ವೆಗೆ ಒಂದು ದೊಡ್ಡ ಕೆಲಸವಾಗಿದ್ದು, ಅಭ್ಯರ್ಥಿಗಳ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲು ಪ್ರಾರಂಭಿಸಿದೆ.

Leave a Comment