Gruhalakshmi Scheme: ಶೀಘ್ರದಲ್ಲಿಯೇ ಗೃಹಲಕ್ಷ್ಮಿ ಹಣ ಬಿಡುಗಡೆ! ಸಿಎಂ ಸಿದ್ದರಾಮಯ್ಯ ಸ್ಪಷ್ಟಣೆ

Gruhalakshmi Scheme: ಶೀಘ್ರದಲ್ಲಿಯೇ ಗೃಹಲಕ್ಷ್ಮಿ ಹಣ ಬಿಡುಗಡೆ! ಸಿಎಂ ಸಿದ್ದರಾಮಯ್ಯ ಸ್ಪಷ್ಟಣೆ

ರಾಜ್ಯದ ಮಹಿಳೆಯರಿಗೆ ಶೀಘ್ರದಲ್ಲಿ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ, ಸಿಎಂ ಅವರು ಭರವಸೆ ನೀಡಿದ್ದು ಎಲ್ಲಾ ಗ್ರಹಲಕ್ಷ್ಮಿಯರು ಫುಲ್ ಖುಷ್ ಆಗಿದ್ದಾರೆ.

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಎಲ್ಲಾ ಗ್ಯಾರೆಂಟಿ ಯೋಜನೆಗಳಿಗಾಗಿ ಹಣವನ್ನು ಬಿಡುಗಡೆ ಮಾಡಿದ್ದೇವೆ, ಗೃಹಲಕ್ಷ್ಮಿ ಯೋಜನೆಯ ಹಣ ಜನವರಿ ತಿಂಗಳಿನಿಂದ ಬಾಕಿ ಇದೆ, ಅದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇವೆ ಎಂದು ಸ್ಪಷ್ಟಣೆ ನೀಡಿದರು.

ಇದರ ಬಗ್ಗೆ ಮುಂದುವರಿದು ಮಾತನಾಡಿದ ಸಿಎಂ ಅವರು, ಪ್ರಣಾಳಿಕೆಯಲ್ಲಿ ಹೇಳಿದ ಹಾಗೆ, 2026-27 ನೇ ಸಾಲಿನ ರೂ.7 ಹಾಲಿನ ಪ್ರೋತ್ಸಾಹ ಧನ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಪ್ರಸಕ್ತ ಶಾಲೆಯಲ್ಲಿ 50% ರೈತರ ಆತ್ಮಹತ್ಯೆ ಕಡಿಮೆಯಾಗಿದೆ, ಬಿಜೆಪಿ ಆಡಳಿತದ ಅವಧಿಯಲ್ಲಿನ ಆತ್ಮಹತ್ಯೆಗಿಂತ ಈಗ ಕಡಿಮೆಯಾಗಿದೆ, ಫೆಬ್ರವರಿ ಅಂತ್ಯದ ವೇಳೆಯಲ್ಲಿ 640 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

Leave a Comment

WhatsApp Group Join Now
Telegram Group Join Now