Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ಡೇಟ್ ಜಾರಿ
ಸಿದ್ದರಾಮಯ್ಯನವರು ಬೆಳಗಾವಿ ಸುವರ್ಣಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯದ ಗ್ರಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಭೇಟಿಯಾದರು, ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಆಯ್ದ್ 25ಕ್ಕೂ ಹೆಚ್ಚಿನ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಫಲಾನುಭವಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರೊಡನೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪ್ರತಿಯೊಬ್ಬರು ತಮ್ಮದೇ ದಾಟಿಯಲ್ಲಿ ಮಾತನಾಡಿದರು, ಮುಖ್ಯಮಂತ್ರಿಗಳು ಯೋಜನೆಯ ಹಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಮಹಿಳೆಯರಿಂದ ಕೇಳಿ ತುಂಬಾ ಖುಷಿ ಪಟ್ಟರು. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಈ ಯೋಜನೆಯ ಹಣವನ್ನು ಬಳಸಿಕೊಂಡು ಎಲ್ಲರೂ ಉತ್ತಮ ಜೀವನ ನಡೆಸುವಂತೆ ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಸಲಹೆಯನ್ನು ನೀಡಿದರು.
ಇದೇ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಈ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಹೇಳಿದರು, ಈ ಯೋಜನೆಯ ಹಣದಿಂದ ಬದುಕನ ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚಿನ ಮಹಿಳಾ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ ಎಂದು ಹೇಳಿದರು.
ಈ ಯೋಜನೆಯಿಂದಾಗಿ ಫಲಾನುಭವಿಗಳ ಜೀವನದಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ ವಿವರಿಸಿದ್ದಾರೆ, ಮಹಾಲಕ್ಷ್ಮಿ ಯೋಜನೆಯು ಬದುಕಿಗೆ ಹೊಸ ಚೈತನ್ಯವನ್ನು ನೀಡಿ ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಫಲಾನುಭವಿಗಳು ತಿಳಿಸಿದ್ದಾರೆ, ಎಲ್ಲಾ ಫಲಾನುಭವಿಗಳ ಮಾತನ್ನು ಕೇಳಿ ಸಂತೃಪ್ತ ಭಾವ ನನ್ನಲ್ಲಿ ಮೂಡಿದೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಗ್ರಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಮತ್ತು ಸೊಸೆಗಳ ನಡುವೆ ಜಗಳ ತಂದಿದೆ ಎಂದು ಆರೋಪಿಸಿದ್ದರು, ಆದರೆ ಇಂದಿನ ಕಾರ್ಯಕ್ರಮಕ್ಕೆ ಸೊಸೆ ಮತ್ತು ಅತ್ತೆಯರೇ ಆಗಮಿಸಿ ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವುದು ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.