ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭಾರತೀಯ ನೌಕಾಪಡೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಭಾರತೀಯ ನೌಕಾಪಡೆಯ ವಿವಿಧ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ತಮ್ಮ ಎಲ್ಲಾ ಮಾಹಿತಿಗಳನ್ನು ನಿಖರವಾಗಿ ತಿಳಿದುಕೊಂಡು ಅರ್ಜಿಸಲ್ಲಿಸುವಂತೆ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ
ಭಾರತೀಯ ನೌಕಾಪಡೆಯ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ, ಬಿಎಸ್‌ಸಿ ಮತ್ತು ಇತರ ಇತರ ವೃತ್ತಿಪರ ಶಿಕ್ಷಣವನ್ನು ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕೊನೆಯ ದಿನಾಂಕ
ಭಾರತೀಯ ನೌಕಾಪಡೆಯ ವಿವಿದ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿರುತ್ತದೆ.