Ration Card: ಈ ಜಿಲ್ಲೆಯವರಿಗೆ ಸಿಹಿ ಸುದ್ದಿ! ಮೊದಲು ಸಿಗಲಿದೆ ರೇಷನ್ ಕಾರ್ಡ್;
ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ ಬಹು ಮುಖ್ಯವಾದ ದಾಖಲೆಯಾಗಿದೆ, ಯಾಕೆಂದರೆ ಸರ್ಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿ ಬಹು ಮುಖ್ಯ. ಹೀಗಾಗಿ ಅರ್ಜಿ ಸಲ್ಲಿಸಿದ ಹಲವಾರು ಜನರು ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ.
ಎರಡು ದಿನಗಳ ಕಾಲಾವಕಾಶ;
ರೇಷನ್ ಕಾರ್ಡಿಗಾಗಿ ಕಾಯುತ್ತಿದ್ದ ಫಲಾನುಭವಿಗಳಿಗೆ ಜುಲೈ 2 ಮತ್ತು 3ರಂದು ಅರ್ಜಿ ಸಲ್ಲಿಸಲು ಹಾಗೂ ವಿಷಯಗಳನ್ನು ತಿದ್ದುಪಡಿ ಮಾಡಲು ಅವಕಾಶ ಮಾಡಲಾಗಿತ್ತು, ಕರ್ನಾಟಕ ಒನ್, ಗ್ರಾಮ ಒನ್ ಗಳಲ್ಲಿ ಹೆಚ್ಚಾಗಿ ಅರ್ಜಿ ಸಲ್ಲಿಕೆ ಆಗಿದೆ ಎನ್ನಲಾಗಿದೆ.
ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್;
ಸರ್ಕಾರದ ಹೆಚ್ಚಿನ ಮಾಹಿತಿ ಪ್ರಕಾರ ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಮೊದಲು ಪಡಿತರ ಚೀಟಿಯನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ಆದರೆ ಅರ್ಜಿ ವಿಲೇವಾರಿಯಾದ ನಂತರವೇ ಯಾರಿಗೆ ಮೊದಲು ಸಿಗಲಿದೆ ಎಂದು ಕಾದು ನೋಡಬೇಕಾಗಿದೆ, ಹೆಚ್ಚಿನ ಮಾಹಿತಿಗೆ ನಮ್ಮ ಪೇಜ್ ಫಾಲೋ ಮಾಡಿ.